ಎಲೆಕ್ಷನ್ ಬಾಂಡ್ ಪ್ರಕರಣ; ನಿರ್ಮಲಾ ಸೀತಾರಾಮ್ ವಿರುದ್ಧ ಎಫ್ಐಆರ್ಗೆ ಸೂಚನೆ
ಬೆಂಗಳೂರು; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲು ಮಾಡಲು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ.. ರಾಜಕೀಯ ಪಕ್ಷಗಳಿಗೆ ದೇಣಿಗೆ ಸಂಗ್ರಹಿಸುವ ಚುನಾವಣಾ ಬಾಂಡ್ಗಳ ಮೂಲಕ ಕೋಟ್ಯಂತರ ರೂಪಾಯಿ ಸುಲಿಗೆ ಆರೋಪದ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ..
ಚುನಾವಣಾ ಬಾಂಡ್ಗಳ ಮೂಲಕ ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕಾರಣದಿಂದಲೇ ಸುಪ್ರೀಂ ಕೋರ್ಟ್ ಇತ್ತೀಚೆಗೆ ಈ ಚುನಾವಣಾ ಬಾಂಡ್ ಗಳನ್ನು ರದ್ದು ಮಾಡುವಂತೆ ಸೂಚನೆ ನೀಡಿತ್ತು.. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜನಾಧಿಕಾರಿ ಸಂಘರ್ಷ ಪರಿಷತ್ನ(ಜೆಎಸ್ಪಿ) ಆದರ್ಶ ಆರ್. ಐಯ್ಯರ್ ಎಂಬುವವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಖಾಸಗಿ ದೂರು ನೀಡಿದ್ದರು.. ಈ ದೂರಿನ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ..
42ನೇ ಎಸಿಎಂಎಂ ಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯಿತು.. ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚನೆ ನೀಡಿರುವ ಕೋರ್ಟ್ ಎಫ್ಐಆರ್ ದಾಖಲಿಸುವಂತೆ ಸೂಚನೆ ಕೊಟ್ಟಿದೆ.. ಬೆಂಗಳೂರಿನ ತಿಲಕ್ನಗರ ಠಾಣೆಗೆ ಕಳಿಸುವಂತೆ ಕೋರ್ಟ್ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್ ಸೂಚನೆ ನೀಡಿದ್ದಾರೆ. ವಿಚಾರಣೆಯನ್ನು ಅಕ್ಟೋಬರ್ 0ಕ್ಕೆ ಮುಂದೂಡಲಾಗಿದೆ.