BengaluruPolitics

ಇಡಿ ಅಧಿಕಾರಿಗಳು ಅಲರ್ಟ್‌; ಸಿದ್ದರಾಮಯ್ಯ ಆಪ್ತರ ಮನೆ, ಕಚೇರಿಗಳ ಮೇಲೆ ದಾಳಿಗೆ ಸಾಧ್ಯತೆ!

ಬೆಂಗಳೂರು; ಮುಡಾ ಹಗರಣದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಹೆಚ್ಚಾಗುತ್ತಿದೆ.. ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿ ತನಿಖೆ ಚುರುಕುಗೊಳಿಸಲಾಗಿದೆ.. ಇನ್ನೊಂದೆಡೆ ಇಡಿ ಅಧಿಕಾರಿಗಳು ಕೂಡಾ ಅಲರ್ಟ್‌ ಆಗಿದ್ದಾರೆ.. ಮುಡಾ ಹಣವನ್ನು ಬೇರೆ ಕ್ಷೇತ್ರಕ್ಕೆ ಬಳಸಿದ ಪ್ರಕರಣದಲ್ಲಿ ಇಸಿಐಆರ್‌ ದಾಖಲು ಮಾಡಿರುವ ಇಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ನೋಟಿಸ್‌ ಕೊಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.. ಜೊತೆ ಸಿದ್ದರಾಮಯ್ಯ ಆಪ್ತರು, ಸಂಬಂಧಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ..
ಈಗಾಗಲೇ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಆಪ್ತರ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ.. ಸಿದ್ದರಾಮಯ್ಯ ಆಪ್ತರ ಮನೆಗಳು, ಕಚೇರಿಗಳು ಹಾಗೂ ಸಂಬಂಧಿಕರ ಬಗ್ಗೆ ಮಾಹಿತಿಯನ್ನೂ ಕೊಲೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.. ರಾಜ್ಯದ ಹಲವೆಡೆ ಇರುವ ಸಿಎಂ ಸಿದ್ದರಾಮಯ್ಯ ಆಪ್ತರು, ಸಂಬಂಧಿಕರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.. ಶೀಘ್ರದಲ್ಲೇ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ ಎಂಬ ಮಾತುಗಳು ಕೇಳೀಬರುತ್ತಿವೆ..
ಸಿಎಂ ಆಪ್ತರ ದೂರವಾಣಿ ನಂಬರ್‌, ಬ್ಯಾಂಕ್‌ ಖಾತೆಗಳು ಇತ್ಯಾದಿಗಳ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗಿದೆ.. ಇನ್ನು ಈ ನಡುವೆ ಲೋಕಾಯುಕ್ತ ಅಧಿಕಾರಿಗಳೂ ಕೂಡಾ ಮುಡಾ ಪ್ರಕರಣದ ಬಗ್ಗೆ ವಿಚಾರಣೆ ಚುರುಕುಗೊಳಿಸಿದ್ದಾರೆ.. ಕೆಸರೆ ಸರ್ವೆ ನಂ.464ರ 3.16 ಎಕರೆ ಜಮೀನಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.. ಈ ವೇಳೆ ದೂರುದಾರ ಸ್ನೇಹಿಮಯಿ ಕೃಷ್ಣರನ್ನೂ ಕರೆದುಕೊಂಡು ಹೋಗಲಾಗಿದೆ..

 

Share Post