BengaluruLifestyle

ಕಿತ್ತೂರು ವಿಜಯೋತ್ಸವ ಯಾತ್ರೆಗೆ ಡಿಕೆಶಿ ಚಾಲನೆ

ಬೆಂಗಳೂರು; ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವದ 200ನೇ ವರ್ಷದ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಕಿತ್ತೂರು ಕ್ಷೇತ್ರದ ಶಾಸಕ ಬಾಬಾ ಸಾಹೇಬ್ ಪಾಟೀಲ್, ಶಾಸಕರಾದ ರಿಜ್ವಾನ್ ಅರ್ಷದ್, ರಾಜು ಕಾಗೆ, ಎನ್.ಎ.ಹ್ಯಾರಿಸ್, ವಿಧಾನ ಪರಿಷತ್ ನ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉನ್ನತ ಅಧಿಕಾರಿಗಳು ಸೇರಿದಂತೆ ಬೆಳಗಾವಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share Post