ದೆಹಲಿಯಲ್ಲಿ ಖರ್ಗೆ ಭೇಟಿಯಾದ ಜಾರಕಿಹೊಳಿ; ಕಾಂಗ್ರೆಸ್‌ನಲ್ಲಿ ಇಷ್ಟೆಲ್ಲಾ ಆಗ್ತಿದೆಯಾ..?
ನವದೆಹಲಿ; ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ.. ಕಾನೂನಿನ ಸುಳಿಯಲ್ಲಿ ಅವರು ಸಿಲುಕಿದ್ದಾರೆ.. ಹೀಗಿರುವಾಗಲೇ ಕಾಂಗ್ರೆಸ್‌ನಲ್ಲಿ ರಾಜಕೀಯ ಗರಿಗೆದರಿದೆ.. ಮುಂದಿನ ಸಿಎಂ ಯಾರಾಗಬೇಕು ಎಂಬ ಚರ್ಚೆ ಶುರುವಾಗಿದೆ.. ಅದ್ರಲ್ಲೂ ಸತೀಶ್ ಜಾರಕಿಹೊಳಿ ಹೆಸರು ಜೋರಾಗಿ ಕೇಳಿಬರುತ್ತಿದೆ.. ಹೀಗಿರುವಾಗಲೇ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ..
ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಸುಮಾರು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆದಿದೆ.. ಮುಖ್ಯಮಂತ್ರಿ ಬದಲಾಗ್ತಾರೆ ಎಂಬ ಸುದ್ದಿಗಳ ನಡುವೆ ಸಿಎಂ ಹುದ್ದೆ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷರ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ..
ಖರ್ಗೆ ಒಬ್ಬರನ್ನೇ ಅಲ್ಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.. ಕಳೆದ ರಾತ್ರಿ 9 ಗಂಟೆಗೆ ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ ಅರ್ಧ ಗಂಟೆಗೂ ಹೆಚ್ಚು ಗೊತ್ತು ಚರ್ಚೆ ನಡೆಸಿದ್ದಾರೆ.. ಈ ವೇಳೆ ಮುಡಾ ಹಗರಣ, ಇಡಿ ಎಂಟ್ರಿ ಇತ್ಯಾದಿ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ..
ಇನ್ನು ಇದೇ ವೇಳೆ ಅಕ್ಟೋಬರ್ 15ರಂದು ಬೆಂಗಳೂರಿಗೆ ಬರುವುದಾಗಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.. ಪಕ್ಷದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಗಾಗಿಯೇ ಅವರು ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ.. ಬೆಂಗಳೂರಿಗೆ ಬಂದಾಗ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಹಲವು ಪ್ರಮುಖ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.. ಮುಂದಿನ ಹೆಜ್ಜೆಗಳ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ..