CrimeNational

ರಸ್ತೆಯಲ್ಲಿ ಹೋಗುತ್ತಿದ್ದಾಗಲೇ ಏಕಾಏಕಿ ಹೊತ್ತಿ ಉರಿದ ಕಾರು!

ಬೆಂಗಳೂರು; ಬೆಂಗಳೂರಿನಲ್ಲಿ ಕಾರೊಂದು ಚಲಿಸುತ್ತಿದ್ದಾಗಲೇ ಏಕಾಏಕಿ ಹೊತ್ತಿ ಉರಿದಿದೆ.. ಬೆಂಗಳೂರು-ಹೊಸೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ.. ಕ್ರೇಟಾ ಕಾರಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಚಾಲಕ ತಕ್ಷಣ ಕಾರು ನಿಲ್ಲಿಸಿದ್ದಾನೆ.. ಕಾರಿನಲ್ಲಿದ್ದವರೆಲ್ಲಾ ಕೆಳಿಗಿಳಿಯುತ್ತಿದ್ದಂತೆ ಇಡೀ ಕಾರು ಧಗಧಗನೆ ಹೊತ್ತಿ ಉರಿದಿದೆ..
ಕಾರು ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾನೆ.. ಆದ್ರೆ ಕಾರು ಬಹುತೇಕ ಸುಟ್ಟು ಕರಕಲಾಗಿದೆ.. ಅತ್ತಿಬೆಲೆ ಸಮೀಫದ ಯಡವನಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ.. ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

Share Post