NationalPolitics

ಮುಡಾ ಹಗರಣದ ಎಫೆಕ್ಟ್ ಹರಿಯಾಣ ಮೇಲೆ ಆಗಿದೆ; ಕೋಳಿವಾಡ

ಬೆಂಗಳೂರು; ಮುಡಾ ಹಗರಣ ಹರಿಯಾಣದಲ್ಲಿ ಸದ್ದು ಮಾಡಿದೆ.. ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಫೆಕ್ಟ್ ನೀಡಿದೆ ಎಂದು ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ..

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ನಾನು ಹೇಳಿದ್ದೆ.. ಅದಕ್ಕೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂಬ ನನ್ನ ಹೇಳಿಕೆ ಅಳಿಸಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಆ ಮಾತನ್ನು ಹೇಳಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆ ಆದರೆ ನೋಟಿಸ್ ಕೊಡುತ್ತಾರೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ, ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದರು.

 

Share Post