Bengaluru

ಮತ್ತೆ ಅಬ್ಬರಿಸಲಿದ್ದಾನೆ ವರುಣ; ಅಕ್ಟೋಬರ್‌ 17ವರೆಗೆ ಭರ್ಜರಿ ಮಳೆ!

ಬೆಂಗಳೂರು; ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.. ಅದ್ರಲ್ಲೂ ಕೂಡಾ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ರೈನ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ..
ಇಂದಿನಿಂದ ಅಕ್ಟೋಬರ್‌ 17ರವರೆಗೆ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.. ಇದರ ಜೊತೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮಳೆಯಾಗಲಿದೆ ಎಂದು ತಿಳಿದುಬಂದಿದೆ.. ಮುಂದಿನ ಏಳು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ.. ಹೀಗಾಗಿ ಮನೆಯಿಂದ ಹೊರಗೆ ಹೋಗುವವರು ಕೊಡೆ ತೆಗೆದುಕೊಂಡು ಹೋಗುವುದು ಒಳ್ಳೆಯದು..
ಈಗಾಗಲೇ ಇವತ್ತು ಬೆಂಗಳೂರಿನ ಹಲವು ಕಡೆ ತುಂತುರು ಮಳೆಯಾಗಿದೆ.. ಜಿಟಿಜಿಟಿ ಮಳೆ ಶುರುವಾಗಿದೆ.. ರಾತ್ರಿ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.. ಕರಾವಳಿ ಭಾಗ ಸೇರಿದಂತೆ ಹಲವು ಭಾಗಗಳಲ್ಲಿ ಅಕ್ಟೋಬರ್‌ 15ರಂದು ಭರ್ಜರಿ ಮಳೆಯಾಗಲಿದೆ.. ಅಕ್ಟೋಬರ್‌ 16 ರಿಂದ 18ರವೆರಗೆ ಕರಾವಳಿಯಾದ್ಯಂತ ವ್ಯಾಪಕವಾಗಿ ಮಳೆಯಾಗಲಿದ್ದು, ಬೆಳಗಾವಿ, ಹಾವೇರಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ..
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಅತಿಯಾದ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಭಾಗದಲ್ಲಿ ಅಕ್ಟೋಬರ್‌ 16 ಹಾಗೂ 17ರಂದು ಯಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದಾರೆ..

Share Post