ಚಿತ್ರಾನ್ನ ಸೇವಿಸಿದ ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ
ದಾವಣಗೆರೆ: ವಸತಿ ಶಾಲೆಯಲ್ಲಿ ಚಿತ್ರಾನ್ನ ಸೇವಿಸಿದ 95 ವಿದ್ಯಾರ್ಥಿ ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ನಡೆದಿದೆ. ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರವಾಗಿ ಚಿತ್ರಾನ್ನ ನೀಡಲಾಗಿತ್ತು. ಆದರೆ ಚಿತ್ರಾನ್ನ ಸೇವಿಸಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಜಗಳೂರು ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದ್ದು, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಸುಚಿತ್ವವಿಲ್ಲದ ಆಹಾರ ನೀಡಿದ್ದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಡಿಎಚ್‌ಒ, ಡಿಡಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.