ಕಲಬುರಗಿ ಬಳಿ ಭೀಕರ ರಸ್ತೆ ಅಪಘಾತ; ನಾಲ್ವರ ದುರ್ಮರಣ!
ಕಲಬುರಗಿ; ಕಲಬುರಗಿಯ ಜೇವರ್ಗಿ ರಸ್ತೆಯ್ಲಿ ಕಳೆದ ರಾತ್ರಿ ಸರಣಿ ಅಪಘಾತ ನಡೆದಿದ್ದು, ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.. ಹಸನಾಪುರ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ..
ಈ ಅಪಘಾತಕ್ಕೆ ಬೈಕ್ ಸವಾರನೇ ಕಾರಣ ಎಂದು ತಿಳಿದುಬಂದಿದೆ.. ಬೈಕ್ ಸವಾರ ಅತಿವೇಗವಾಗಿ ಬೈಕ್ ಸವಾರಿ ಮಾಡಿಕೊಂಡು ಬಂದಿದ್ದು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.. ಡಿಕ್ಕಿಯ ರಭಸಕ್ಕೆ ಬೈಕ್ ಲಾರಿಗೆ ಅಡಿಗೆ ಸಿಲುಕಿದೆ.. ಹೀಗಾಗಿ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದ್ದಾನೆ.. ಈ ಹಿನ್ನೆಲೆಯಲ್ಲಿ ಹಿಂದೆ ವೇಗವಾಗಿ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.. ಇದರಿಂದಾಗಿ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ..
ಕಾರು ಹಾಗೂ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿವೆ.. ಕಲಬುರಗಿ-ಜೇವರ್ಗ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.. ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.. ಇಂದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ..