CrimeHealth

ನಟಿ ಅಮೂಲ್ಯ ಸಹೋದರ ದೀಪಕ್‌ ಅರಸ್‌ ನಿಧನ!

ಬೆಂಗಳೂರು; ನಟಿ ಅಮೂಲ್ಯ ಅವರ ಸಹೋದರ ಹಾಗೂ ಸಿನಿಮಾ ನಿರ್ದೇಶಕ ದೀಪಕ್‌ ಅರಸ್‌ ಸಾವನ್ನಪ್ಪಿದ್ದಾನೆ.. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಸಂಜೆ 7 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.. ಅವರಿಗೆ 42 ವರ್ಷ ವಯಸ್ಸಾಗಿತ್ತೆಂದು ತಿಳಿದುಬಂದಿದ್ದು, ಕಿಡ್ನಿ ವೈಫಲ್ಯದಿಂದ ಅವರು ಬಳಲುತ್ತಿದ್ದರು ಎಂದು ತಿಳಿದುಬಂದಿದೆ..
ಮಸಾಲಜಿ, ಶುಗರ್‌ ಪ್ಯಾಕ್ಟರಿ ಸೇರಿದಂತೆ ಹಲವು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದರು.. ಹಲವು ವರ್ಷಗಳಿಂದ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು.. ಡಯಾಲಿಸಿಸ್‌ ಮಾಡಿಸುತ್ತಿದ್ದರು.. ಆದ್ರೆ, ಇತ್ತೀಚೆಗೆ ತೀವ್ರ ಅನಾರೋಗ್ಯಕ್ಕೀಡಾಗಿದ್ದರು ಎಂದು ತಿಳಿದುಬಂದಿದೆ.. ದೀಪಕ್‌ ಅರಸ್‌ ನಿಧನದಿಂದಾಗಿ ಅವರ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ..

Share Post