12ನೇ ಮಹಡಿಯಿಂದ ಹಾರಿದ ಯುವಕ; ಬದುಕಿದ್ದೇ ಪವಾಡ
ಉತ್ತರ ಪ್ರದೇಶ; 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಲಾಗಿದೆ.. ನೋಯ್ಡಾದ ಸೂಪರ್ಟೆಕ್ ಕೇಪ್ಟೌನ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ..
ಕಟ್ಟಡದ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.. ಆದ್ರೆ ಅದೃಷ್ಟವಶಾತ್ ಬಾಲ್ಕನಿಯಲ್ಲಿ ಸಿಲುಕಿ ನೇತಾಡುತ್ತಿದ್ದ.. ಇದನ್ನು ನೋಡಿದವರು ಕೂಡಲೇ ನೆರವಿಗೆ ಬಂದಿದ್ದಾರೆ.. ಆತನನ್ನು ರಕ್ಷಣೆ ಮಾಡಿದ್ದಾರೆ..
ಯುವಕ ಗೂಗಲ್ ದಿ ಆನ್ ಬಾಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.. ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆಗಿದ್ದ.. ಇತ್ತೀಚೆಗೆ ಕೆಲಸ ಕಳೆದುಕೊಂಡಿದ್ದ ಯುವಕ ಖಿನ್ನತೆಗೆ ಒಳಗಾಗಿದ್ದ.. ಹೀಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ..