ರಾಜ್ಯದಲ್ಲಿ 3.63 ಲಕ್ಷ BPL ಕಾರ್ಡ್‌ಗಳು ರದ್ದು..!
ಬೆಂಗಳೂರು; ರಾಜ್ಯದಲ್ಲಿ ಸುಮಾರು 3.63 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ.. ವಿಕಾಸಸೌಧದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಈ ಮಾತು ಹೇಳಿದ್ದಾರೆ..
ರಾಜ್ಯದಲ್ಲಿ 13.87 ಲಕ್ಷ ಅನರ್ಹ ಕಾರ್ಡ್‌ಗಳು ಪತ್ತೆಯಾಗಿವೆ.. ಇದರಲ್ಲಿ 3.63 ಲಕ್ಷ ಕಾರ್ಡ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಮಾಡಲಾಗಿದೆ.. ಇನ್ನೂ ಕೂಡಾ 3.97 ಲಕ್ಷ ಅನರ್ಹ ಕಾರ್ಡ್‌ಗಳನ್ನು ರದ್ದುಪಡಿಸಬೇಕಿದೆ.. ಈ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.. ರಾಜ್ಯದಲ್ಲಿ 4,036 ಸರ್ಕಾರಿ ನೌಕರರು ಕೂಡಾ ಬಿಪಿಎಲ್ ಕಾರ್ಡ್ ಪಡೆದಿದ್ದರು. ಇದರಲ್ಲಿ 2,964 ಕಾರ್ಡ್‌ಗಳನ್ನು ರದ್ದು ಮಾಡಲಾಗಿದ್ದು, ಅವರಿಗೆ ದಂಡ ಕೂಡಾ ವಿಧಿಸಲಾಗಿದೆ ಎಂದೂ ಸಚಿವರು ಹೇಳಿದ್ದಾರೆ..