BengaluruPolitics

ಸಿಪಿವೈ, ಡಿಕೆಶಿ ಗುಪ್ತ ಮಾತುಕತೆ; ಯೋಗೇಶ್ವರ್‌ ಕಾಂಗ್ರೆಸ್‌ ಅಭ್ಯರ್ಥಿ!

ಬೆಂಗಳೂರು; ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾರು..? ಸಿ.ಪಿ.ಯೋಗೇಶ್ವರ್‌ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ..? ಇವು ಎಲ್ಲರ ಕುತೂಹಲ ಕೆರಳಿಸಿರುವ ಪ್ರಶ್ನೆಗಳು.. ಈ ಪ್ರಶ್ನೆಗಳಿಗೆ ಬಹುತೇಕ ಇವತ್ತೇ ಉತ್ತರ ಸಿಗಲಿದೆ.. ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಯೋಗೇಶ್ವರ್‌ ಮನವೊಲಿಸಲು ಸಾಕಷ್ಟು ಪ್ರಯತ್ನ ನಡೆಸಿದ್ದಾರೆ.. ಆದ್ರೆ, ಯೋಗೇಶ್ವರ್‌ ಯಾವುದಕ್ಕೋ ಸೊಪ್ಪು ಹಾಕುತ್ತಿಲ್ಲ.. ಈ ನಡುವೆ ಯೋಗೇಶ್ವರ್‌ ಅವರು ಕಳೆದ ರಾತ್ರಿ ಕಾಂಗ್ರೆಸ್‌ ನಾಯಕರ ಜೊತೆ ಗುರುತಿಸಿಕೊಂಡಿದ್ದಾರೆ.. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.. ಹೀಗಾಗಿ ಯೋಗೇಶ್ವರ್‌ ಅವರು ಕಾಂಗ್ರೆಸ್‌ ಸೇರಬಹುದು, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಬಹುದು ಎಂಬ ಮಾತುಗಳಿಗೆ ಪುಷ್ಠಿ ಸಿಕ್ಕಂತಾಗಿದೆ..
ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಯೋಗೇಶ್ವರ್‌ ಪಕ್ಷೇತರನಾಗಿ ಸ್ಪರ್ಧೆ ಮಾಡೋದಕ್ಕೆ ಸಿದ್ಧತೆ ನಡೆಸಿದ್ದರು.. ಈ ನಡುವೆ ಕಾಂಗ್ರೆಸ್‌ನಿಂದ ಅವರಿಗೆ ಆಹ್ವಾನ ಬಂದಿದೆ ಎಂದು ಹೇಳಲಾಗಿತ್ತು.. ಈ ನಡುವೆ ತಡರಾತ್ರಿ ಸಿ.ಪಿ.ಯೋಗೇಶ್ವರ್‌ ಅವರು ಖಾಸಗಿ ಹೋಟೆಲ್‌ ಒಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.. ಇದರಿಂದಾಗಿ ಅವರು ಕಾಂಗ್ರೆಸ್‌ ಸೇರ್ಪಡೆಗೆ ವೇದಿಕೆ ಸಿದ್ಧವಾಗಿದೆ ಎಂದು ಹೇಳಲಾಗುತ್ತಿದೆ..
ಕುಮಾರಸ್ವಾಮಿಯವರು ಮಂಡ್ಯದಿಂದ ಲೋಕಸಭೆ ಪ್ರವೇಶ ಮಾಡಿದ್ದರಿಂದ ಚನ್ನಪಟ್ಟಣ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.. ಈ ಹಿನ್ನೆಲೆಯಲ್ಲಿ ನವೆಂಬರ್‌ 13ರಂದು ಚನ್ನಪಟ್ಟಣ ವಿಧಾನಸಭೆಗೆ ಉಪಚುನಾವನೆ ನಡೆಯುತ್ತಿದೆ.. ಯೋಗೇಶ್ವರ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯೋದಕ್ಕೆ ಸಿದ್ಧತೆ ನಡೆಸಿದ್ದರು.. ಆದ್ರೆ ಈ ಕ್ಷೇತ್ರವನ್ನು ಬಿಜೆಯವರು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದಾರೆ.. ಯೋಗೇಶ್ವರ್‌ಗೆ ಜೆಡಿಎಸ್‌ನಿಂದ ಟಿಕೆಟ್‌ ನೀಡೋದಾಗಿ ಆಹ್ವಾನ ನೀಡಲಾಗಿತ್ತು.. ಆದ್ರೆ ಯೋಗೇಶ್ವರ್‌ ಅದಕ್ಕೆ ಒಪ್ಪಿಲ್ಲ.. ಕೊಟ್ಟರೆ ಬಿಜೆಪಿಯಿಂದಲೇ ಟಿಕೆಟ್‌ ಕೊಡಲಿ ಎಂದು ಪಟ್ಟು ಹಿಡಿದಿದ್ದರು.. ಈ ನಡುವೆ ಪಕ್ಷೇತರನಾಗಿ ಸ್ಪರ್ಧೆ ಮಾಡೋದಾಗಿ ಘೋಷಣೆ ಮಾಡಿದ್ದರು.. ಇದರ ಬೆನ್ನಲ್ಲೇ ಅವರು ಕಾಂಗ್ರೆಸ್‌ ನಾಯಕರ ಜೊತೆ ಚರ್ಚೆ ನಡೆಸಿರುವುದು ಕುತೂಹಲ ಮತ್ತಷ್ಟು ಹೆಚ್ಚು ಮಾಡಿದೆ..
ಮಂಗಳವಾರ ರಾಜ್ಯದ ಕಾಂಗ್ರೆಸ್ ನಾಯಕರು ಹೈಕಮಾಂಡ್‌ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಸಿಪಿವೈ ಕಾಂಗ್ರೆಸ್ ಸೇರ್ಪಡೆಗೆ ಅನುಮತಿ ಪಡೆದಿದ್ದಾರೆನ್ನಲಾಗಿದೆ. ತಡರಾತ್ರಿ ಸಿಪಿ ಯೋಗೇಶ್ವರ್‌ ಹಾಗೂ ಡಿಕೆಶಿ ಮುಂದಿನ ನಡೆಗಳ ಬಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಚರ್ಚೆ ನಡೆಸಿದ್ದಾರೆ. ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಗಳಿವೆ.

Share Post