CrimeDistricts

ಮನೆ ಗೋಡೆ ಕುಸಿದು ಮಹಿಳೆ ಸಾವು!

ತುಮಕೂರು; ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆ ಗೋಡೆ ಕುಸಿದು‌ ಬಿದ್ದು ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಧಾರುಣ ಘಟನೆ ಇಂದು ನಡೆದಿದೆ.

ತುಮಕೂರು‌ ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಜಿ. ಹೊಸಹಳ್ಳಿ ನಿವಾಸಿ ಸಹನಾ(27) ಮೃತಪಟ್ಟ ದುರ್ದೈವಿ. ಬೆಳಿಗ್ಗೆ ಸ್ನಾನಕ್ಕೆ ಹಳೆಯ ಮನೆಗೆ ತೆರಳಿದ್ದ ವೇಳೆ ಗೋಡೆ ಕುಸಿದು ಸಹನಾ ಮೇಲೆ ಬಿದ್ದಿದೆ, ಮಣ್ಣಿನಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಇನ್ನು, ಮಣ್ಣಿನಡಿ ಸಿಲುಕಿದ್ದ ಸಹನಾಳನ್ನ ಗ್ರಾಮಸ್ಥರು ರಕ್ಷಣೆ ಮಾಡಿ, ಗುಬ್ಬಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ಸಹನಾ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post