ಕಟ್ಟಡ ಕುಸಿತದಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿಕೆ; ಪ್ರಧಾನಿ ಪರಿಹಾರ ಘೋಷಣೆ
ಬೆಂಗಳೂರು; ಭಾರೀ ಮಳೆಯಿಂದಾಗಿ ನಿರ್ಮಣ ಹಂತದ ಕಟ್ಟಡ ಕುಸಿದು ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಎಂಟು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದರು.. ಇದೀಗ ಈ ಕಾರ್ಮಿಕರ ಕುಟುಂಬದ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದಾರೆ.. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.. ಈ ಬಗ್ಗೆ ಪ್ರಧಾನಿ ಕಾರ್ಯಾಲಯದಿಂದ ಅಧಿಕೃತವಾಗಿ ಎಕ್ಸ್ ಖಾತೆಯಲ್ಲಿ ಸಂದೇಶ ಪ್ರಕಟಿಸಲಾಗಿದೆ..
ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ.. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.. ಮೃತರೆಲ್ಲರೂ ಬಿಹಾರ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಪ್ರದೇಶ ಮೂಲದವರಾಗಿದ್ದಾರೆ.. ಸದ್ಯ ಎಂಟು ಮೃತದೇಹಗಳು ಪತ್ತೆಯಾಗಿವೆ.. ಇದುವರೆಗೆ 14 ಕಾರ್ಮಿಕರನ್ನು ರಕ್ಷನೆ ಮಾಡಲಾಗಿದೆ.. ಇನ್ನೂ ಕೆಲವರು ಸಿಲುಕಿರುವ ಶಂಕೆ ಇದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ..
ಬಿಹಾರ ಮೂಲದ ಅರ್ಮಾನ್, ಮೊಹಮ್ಮದ್ ಸಾಹೀಲ್, ಶ್ರೀರಾನ್ ಕಿರುಪಾಲ್, ಸೋಲೋ ಪಾಸ್ವಾನ್, ತಮಿಳುನಾಡು ಮೂಲದ ಮಣಿಕಂಠನ್, ಸತ್ಯರಾಜು, ಆಂಧ್ರದ ತುಳುಸಿರೆಡ್ಡಿ, ಉತ್ತರ ಪ್ರದೇಶದ ಪುಲ್ಚನ್ ಯಾದವ್ ಎಂಬುವರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಅವಶೇಷಗಳಡಿ ಸಿಲುಕಿರುವ ಏಳುಮಲೈ, ಗಜೇಂದ್ರ ಪತ್ತೆಗೆ ಶೋಧ ನಡೆಯುತ್ತಿದೆ.