ಪಾರ್ಕ್‌ನಲ್ಲಿ ಅಪರಿಚಿತರಿಂದ ಗುಂಡಿನ ದಾಳಿ
ಮುಂಬೈ: ಇಲ್ಲಿನ ಚೆಂಬೂರ್ ಪ್ರದೇಶದ ಆರ್‌ಎಸ್‌ಎ ಪಾರ್ಕ್‌ನಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದೆ. ಇಬ್ಬರು ಅಪರಿಚಿತರು ಬೈಕಿನಲ್ಲಿ ಬಂದು ಎರಡು ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ರವೀಂದ್ರ ಗಾಯಕ್ವಾಡ್ ಎಂಬುವವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇಬ್ಬರೂ ಆರೋಪಿಗಳು ಕೃತ್ಯ ಎಸಗಿದ ನಂತರ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಂತರ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಆರೋಪಿಗಳ ಚಲನವಲನ ಅಕ್ಕ ಪಕ್ಕದ ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಅದರ ಆಧಾರದ ಮೇಲೆ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.