Bengaluru

ಎಂಇಎಸ್‌ ಉದ್ಧಟತನದ ವಿರುದ್ಧ ಹೋರಾಟ; ನಾಳೆ ಸಭೆ ಕರೆದ ವಾಟಾಳ್‌

ಬೆಂಗಳೂರು: ಪದೇ ಪದೇ ರಾಜ್ಯದಲ್ಲಿ ಉದ್ಧಟತನ ಪ್ರದರ್ಶಿಸುತ್ತಿರುವ ಎಂಇಎಸ್‌ ಹಾಗೂ ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕೆಂಬ ಕೂಗು ಜೋರಾಗುತ್ತಿದೆ. ಬೆಳಗಾವಿಯಲ್ಲಿ ಎಂಇಎಸ್‌ ಪುಂಡರು ನಡೆಸಿರುವ ದಾಂದಲೆಯನ್ನು ಕನ್ನಡ ಪರ ಹೋರಾಟಗಾರರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಎಂಇಎಸ್‌ ಹಾಗೂ ಶಿವಸೇನೆ ವಿರುದ್ಧ ಹೋರಾಟಕ್ಕಾಗಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ಈ ಸಂಬಂಧ ಕನ್ನಡ ಪರ ಹೋರಾಟಗಾರ ಸಭೆ ಕರೆಯಲಾಗಿದೆ. ಬುಧವಾರ ಬೆಳಗ್ಗೆ ೧೧.೩೦ಕ್ಕೆ ಬೆಂಗಳೂರಿನ ವುಡ್‌ಲ್ಯಾಂಡ್ಸ್‌ ಹೋಟೆಲ್‌ನಲ್ಲಿ ಸಭೆ ಕರೆಯಲಾಗಿದೆ.

ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಈ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ  ಸಾ.ರಾ,ಗೋವಿಂದು,  ಕೆ.ಆರ್‌.ಕುಮಾರ್‌, ಶಿವರಾಮೇಗೌಡ, ಪ್ರವೀಣ್‌ ಶೆಟ್ಟಿ, ಮಂಜುನಾಥ್‌ ದೇವ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ. ಎಂಇಎಸ್‌ ಹಾಗೂ ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲು ಕನ್ನಡ ಪರ ಹೋರಾಟಗಾರರು ಚಿಂತನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿದ್ದು, ಬಂದ್‌ಗೆ ಕರೆ ನೀಡುವ ಬಗ್ಗೆ ನಾಳಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.

Share Post