National

ಹಿಮಾಚಲ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಬಡಿದಾಟ

ಹಿಮಾಚಲ: ಹಿಮಾಚಲ ವಿಶ್ವವಿದ್ಯಾಲಯದಲ್ಲಿ ಎರಡು ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ಜಗಳ ಕಾಯ್ದಿರುವ ವಿದ್ಯಾರ್ಥಿಗಳು ಬಡಿಗೆಗಳನ್ನು ಹಿಡಿದುಕೊಂಡು ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಕೆಲವರು ಬಡಿಗೆಗಳನ್ನು ಹಿಡಿದು ವಿದ್ಯಾರ್ಥಿಗಳನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದು, ಇದರ ವಿಡಿಯೋ ವೈರಲ್‌ ಆಗಿದೆ.

ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಹಾಗೂ ಎಸ್‌ಎಫ್‌ಐ ಸಂಘಟನೆಗೆ ಸೇರಿದ ಕಾರ್ಯಕರ್ತರ ನಡುವೆ ಈ ಜಗಳ ಆಗಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಬಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಪೊಲೀಸರು ಗಲಾಟೆಯನ್ನು ತಡೆಯಲು ಹರಸಾಹಸಪಡಬೇಕಾಯಿತು.

 

Share Post