ಹೈದರಾಬಾದ್ಗೆ ಭಾಗ್ಯನಗರ ಎಂಬ ಹೆಸರಿಡಲು ಮತ್ತೆ ಜೋರಾಯ್ತು ಕೂಗು
ಹೈದರಾಬಾದ್: ಜನವರಿ ಮೊದಲ ವಾರದಲ್ಲಿ ಆರ್ಎಸ್ಎಸ್ ಮತ್ತು ಬಿಜೆಪಿ ೩ ದಿನಗಳ ಸಮನ್ವಯ ಸಭೆ ಕರೆದಿದೆ. ಇದರಲ್ಲಿ ಹೈದರಾಬಾದ್ಗೆ ಭಾಗ್ಯನಗರ ಎಂದು ಮರುನಾಮಕರಣ ಮಾಡುವ ಕಾರ್ಯಸೂಚಿಯನ್ನು ಮತ್ತೊಮ್ಮೆ ಪರೋಕ್ಷವಾಗಿ ಪ್ರಸ್ತಾಪಿಸಿದೆ.
೨೦೨೨ರಲ್ಲಿ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಮತ್ತು ಬಿಜೆಪಿ ಹಾಗೂ ವಿವಿಧ ಅಂಗ ಸಂಸ್ಥೆಗಳ ಕಾರ್ಯವೈಖರಿ ಮತ್ತು ಚುನಾವಣೆಗೆ ಮಾಡಿಕೊಳ್ಳುತ್ತಿರುವ ಸಿದ್ಧತೆ ಬಗ್ಗೆ ಈ ಸಮನ್ವಯ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಆರ್ಎಸ್ಎಸ್ ಈ ಕುರಿತು ಟ್ವೀಟ್ ಮಾಡಿದೆ. ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಎಸ್ಎಸ್ನಿಂದ ಪ್ರೇರಿತವಾಗಿರುವ ವಿವಿಧ ಸಂಘಟನೆಗಳ ಮುಖ್ಯ ಪದಾಧಿಕಾರಿಗಳ ಸಮನ್ವಯ ಸಭೆ 2022ರ ಜನವರಿ 5 ರಿಂದ 7ರವರೆಗೆ ತೆಲಂಗಾಣದ ಭಾಗ್ಯನಗರದಲ್ಲಿ ನಡೆಯಲಿದೆ ಎಂದು ಸುನಿಲ್ ಅಂಬೇಕರ್ ಎಂಬುವವರ ಹೆಸರಿನಲ್ಲಿ ಟ್ವೀಟ್ ಮಾಡಲಾಗಿದೆ.