ಮತ್ತೆ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಶಿವಸೇನೆ ಪುಂಡರು
ಬೆಳಗಾವಿ: ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಅಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಈ ವೇಳೆ ಕರ್ನಾಟಕ ಸರ್ಕಾರದ ವಿರುದ್ಧ ಶಿವಸೇನಾ ಕಾರ್ಯಕರ್ತರು ಧಿಕ್ಕಾರ ಕೂಗಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಜ್ ನ ಮಹಾರಾಣಾ ಪ್ರತಾಪ್ ಚೌಕ್ ನಲ್ಲಿ ಪುಂಡಾಟ ಮೆರೆಯಲಾಗಿದೆ. ಇದೇ ವೇಳೆ ಕರ್ನಾಟಕದವರು ಮಹಾರಾಷ್ಟ್ರ ಗಡಿಗೆ ನುಗ್ಗಿ ಪ್ರತಿಭಟನೆ ನಡೆಸ್ತೇವೆ ಎಂದು ಶಿವಸೇನೆ ಪ್ರಮುಖ ಚಂದ್ರಕಾಂತ ಮೈನಗುರೆ ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಇನ್ನು ಕಾಗವಾಡ ಗಡಿಗೆ ಬಂದು ಪ್ರತಿಭಟನೆ ನಡೆಸ್ತೀವಿ ಎಂದು ಶಿವಸೇನೆ ಪುಂಡರು ಹೇಳಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಮಹಾರಾಷ್ಟ್ರದ ಗಡಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.