ಉತ್ತರ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ವಶ
ಗಾಜಿಯಾಬಾದ್: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸನಿಹದಲ್ಲಿದೆ. ಇಂತಹ ಸಂರ್ಭದಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಮಾರಾಟ ಹಾಗೂ ಖರೀದಿ ಹೆಚ್ಚಾಗುತ್ತಿದೆ. ಅಕ್ರಮವಾಗಿ ಪಿಸ್ತೂಲ್ ಹಾಗೂ ಬಂದೂಕುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಘಾಜಿಯಾಬಾದ್ ಪೊಲೀಸರು ಭೇದಿಸಿದ್ದಾರೆ. ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳೊಂದಿಗೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ಬಂದೂಕು, ಪಿಸ್ತೂಲ್ ಸೇರಿ ಹಲವು ವಿವಿಧದ ಶಸ್ತ್ರಾಸ್ತ್ರಗಳನ್ನು ಆರೋಪಿಗಳು ತಯಾರು ಮಾಡುತ್ತಿದ್ದರು. ಇದರ ಮಾಹಿತಿ ಅರಿತ ಘಾಜಿಯಾಬಾದ್ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಚುನಾವಣೆ ಸಂದರ್ಭದಲ್ಲಿ ಬಳಸಲು ಇವನ್ನು ತಯಾರು ಮಾಡುತ್ತಿದ್ದರೆಂದು ಹೇಳಲಾಗುತ್ತಿದೆ.
ಅಕ್ರಮ ಶಸ್ತ್ರಾಸ್ತ್ರ ತಯಾರಿಸುತ್ತಿದ್ದ ಅಮನ್, ನೂರ್ ಹಸನ್, ಸಲ್ಮಾನ್, ಸೋಹೈಲ್ ಹಾಗೂ ಯೂಸುಫ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಅಕ್ರಮ ಶಸ್ತ್ರಾಸ್ತ್ರಗಳ ಮಾರಾಟದ ಮಾಸ್ಟರ್ ಮೈಂಡ್ ಗಳು ಸಲ್ಮಾನ್ ಮತ್ತು ಸೊಹೈಲ್ ಎಂದು ತಿಳಿದುಬಂದಿದೆ. ಇಬ್ಬರೂ ಮೀರತ್ ನಲ್ಲಿ ತಯಾರಿಸಿದ ಅಕ್ರಮ ಶಸ್ತ್ರಾಸ್ತ್ರಗಳನ್ನು ಗಾಜಿಯಾಬಾದ್ ಗೆ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳು ಮೀರತ್‌ನ ಮನೆಯೊಂದರಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸಿ, ಅವುಗಳನ್ನು ಉತ್ತರ ಪ್ರದೇಶ ಹಾಗೂ ದೆಹಲಿಯಲ್ಲಿ ಮಾರಾಟ ಮಾಡುತ್ತಿದ್ದರೆಂದು ಗೊತ್ತಾಗಿದೆ.
ಬಂಧಿತರಿಂದ ೩೧೫ ಬೋರ್ ಮತ್ತು ೧೨ ಬೋರ್ ಮತ್ತು ೩೨ ಬೋರ್ ಕಾರ್ಟ್ರಿಡ್ಜ್ ಗಳನ್ನು ಹಾಗೂ ಬಂದೂಕು, ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.