ಮತ್ತೆ ಉಗ್ರರ ಗುಂಡಿನ ದಾಳಿ, ಓರ್ವ ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್, ಶ್ರೀನಗರದಲ್ಲಿ ಉಗ್ರರು ಪ್ರತ್ಯೇಕ ಎರಡು ದಾಳಿಯಲ್ಲಿ ಪೊಲೀಸ್ ಅಧಿಕಾರಿ ಹಾಗೂ ಒಬ್ಬ ನಾಗರಿಕ ಹತ್ಯೆಯಾಗಿದ್ದಾರೆ.ಅನಂತನಾಗ್ ಪಟ್ಟಣದ ಬಿಜ್ಬೆಹಾರ್ನಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಅಧಿಕಾರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಪೊಲೀಸ್ ಅಧಿಕಾರಿ ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.ಮೃತ ಅಧಿಕಾರಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.