ಅಖಿಲೇಶ್ ಯಾದವ್ ಅವರ ಪತ್ನಿ, ಮಗಳಿಗೆ ಕೊರೋನಾ ಸೋಂಕು ದೃಢ
ಲಕ್ನೋ: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಹಾಗೂ ಪುತ್ರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ನಿನ್ನೆ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಅಖಿಲೇಶ್ ಯಾದವ್ ಅವರಿಗೆ ನೆಗೆಟಿವ್ ವರದಿ ಬಂದಿದೆ. ಆದರೆ ಅವರ ಪತ್ನಿ ಡಿಂಪಲ್ ಯಾದವ್ ಮಗಳಿಗೆ ಕೊರೋನಾ ಸೋಂಕು ತಗಲಿದೆ.
ಈ ಕುರಿತಂತೆ ಡಿಂಪಲ್ ಯಾದವ್ ತಮ್ಮ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ. ನನಗೆ ಕೋವಿಡ್-19 ದೃಢಪಟ್ಟಿದೆ. ನಾನು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದುಕೊಂಡಿದ್ದೇನೆ. ನನಗೆ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ. ಇದೀಗ ನಾನು ಕ್ವಾರಂಟೈನ್‍ನಲ್ಲಿದ್ದು, ಇತ್ತೀಚೆಗಷ್ಟೇ ನನ್ನನ್ನು ಭೇಟಿಯಾದ ಎಲ್ಲರೂ ಶೀಘ್ರದಲ್ಲಿಯೇ ಕೊರೋನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸಿದ್ದಾರೆ.ಡಿಂಪಲ್ ಯಾದವ್ ಮತ್ತು ಅವರ ಮಗಳಿಗೆ ಕೊರೋನಾ ದೃಢಪಟ್ಟಿರುವುದರಿಂದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕುರಿತಂತೆ ಪ್ರಚಾರ ನಡೆಸಲು ಅಖಿಲೇಶ್ ಯಾದವ್ ಅವರಿಗೆ ಅಡ್ಡಿಯುಂಟಾಗಬಹುದು. ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.
मैंने कोविड टेस्ट कराया जिसकी रिपोर्ट पॉजिटिव है।
मैं पूरी तरह से वैक्सिनेटेड हूं और कोई भी लक्षण अभी दिखाई नहीं दे रहे है।
अपनी और दूसरों की सुरक्षा की दृष्टि से मैंने खुद को अलग कर लिया है।
हाल फिलहाल मुझसे मिलने वाले सभी लोगों से अनुरोध है कि वे अपना टेस्ट जल्द कराएं।
— Dimple Yadav (@dimpleyadav) December 22, 2021