ಬೆಂಗಳೂರಲ್ಲಿ ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ
ಬೆಂಗಳೂರು : ಬಸ್, ರೈಲು ಮತ್ತು ಮುಂತಾದ ಸಾರ್ವಜನಿಕ ಸಾರಿಗೆ ಮೂಲಕ ಹೊರ ರಾಜ್ಯಗಳಿಂದ ಮಾದಕ ವಸ್ತುಗಳನ್ನು ತಂದು ಬೆಂಗಳೂರಲ್ಲಿ ಮಾರುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ಪ್ರಕಾಶ್ (೩೨) ಹಾಗೂ ಧ್ಯಾಮರಾಜ್ (೨೨) ಅವರು ವಿಶಾಖಪಟ್ಟಣದ ಮೂಲದವರು. ಇವರಿಂದ ಸುಮಾರು ೫ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳಿಬ್ಬರು ಆಗಾಗ ಬೆಂಗಳೂರಿಗೆ ಬಂದು ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿಕೊಂಡ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಲಾಗಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಐಟಿ ಉದ್ಯೋಗಿಗಳಿಗೆ ಮಾದಕ ವಸ್ತುಗಳನ್ನು ನೀಡುತ್ತಿದ್ದೆವು, ನಂತರ ಅದರಲ್ಲಿ ಬಂದ ಹಣದಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದೆವು ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.