Crime

ಅಯೋಧ್ಯೆಯಲ್ಲಿ ಭೀಕರ ಅಪಘಾತ; ಮೂವರು ವಿದ್ಯಾರ್ಥಿನಿಯರು ದುರ್ಮರಣ

ಅಯೋಧ್ಯಾ: ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್‌ನಡಿ ಸಿಲುಕಿ ಮೂವರು ವಿದ್ಯಾರ್ಥಿನಿಯರು ದಾರುಣ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಲಖನೌ-ಗೋರಖ್‌ಪುರ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ.  ವೇಗವಾಗಿ ಬರುತ್ತಿದ್ದ ಟ್ರಕ್​ವೊಂದು ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಡ್ರಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಶಾಲೆಗೆ ನಡೆದುಕೊಂಡು ತೆರಳುತ್ತಿದ್ದ ನಾಲ್ವರು ಬಾಲಕಿಯರು ಟ್ರಕ್​​ನಡಿ ಸಿಲುಕಿದ್ದಾರೆ. ಇವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಓರ್ವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಅಯೋಧ್ಯೆಯಲ್ಲಿ ನಡೆದ ದುರಂತಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಂತಾಪ ಸೂಚಿಸಿದ್ದಾರೆ. ಕೊತೆಗೆ ಮೃತರ ಕುಟುಂಬಗಳಿಗೆ ತಲಾ ೨ ಲಕ್ಷ ರೂಪಾಯಿ ಹಾಗೂ ಗಾಯಾಳುವಿಗೆ ಐವತ್ತು ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

Share Post