National

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ : ಜಮ್ಮು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಭದ್ರತಾ ಪಡೆಯೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

ಶೋಪಿಯಾನ್‌ನ ಚೌಗಮ್‌ನಲ್ಲಿ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆಗೊಳಗಾದ ಇಬ್ಬರು ಭಯೋತ್ಪಾದಕರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಹತರಾದವರಿಂದ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ

Share Post