ಜನವರಿ 10ರಿಂದ ರಾಜ್ಯಾದ್ಯಂತ ಬೂಸ್ಟರ್ ಡೋಸ್
ಬೆಂಗಳೂರು: ಜನವರಿ ೧೦ರಿಂದ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸಿಎಂ ನೇತೃತ್ವದಲ್ಲಿ ನಡೆದ ಸಭೆ ಬಳಿ ಮಾತನಾಡಿದ ಅವರು, ಜನವರಿ 10ರಿಂದ ರಾಜ್ಯಾದ್ಯಂತ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುತ್ತೇವೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ತಮ್ಮ ತಮ್ಮ ಜಿಲ್ಲೆಗಳಲ್ಲಿ ಬೂಸ್ಟರ್ ಡೋಸ್ ಅಭಿಯಾನಕ್ಕೆ ಚಾಲನೆ ನೀಡುವರು ಎಂದು ತಿಳಿಸಿದರು. ಆರೋಗ್ಯ ಹಾಗೂ ಮುಂಚೂಣಿ ಕಾರ್ಯಕರ್ತರ ಜೊತೆಗೆ 60 ವರ್ಷ ಮೇಲ್ಪಟ್ಟವರಿಗೂ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಇನ್ನು ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರದಿಂದ ಗೈಡ್ಲೈನ್ಸ್ ಬಂದ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.