Districts

ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ; ಚಾಲನೆ ನೀಡಲು ಚುಂಚನಗಿರಿ ಶ್ರೀಗೆ ಮನವಿ

ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಮಠದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರನ್ನು ಭಾನುವಾರ ಭೇಟಿ ಮಾಡಿದರು.  ಜನವರಿ 9 ರಂದು ಕಾಂಗ್ರೆಸ್‌ ಪಕ್ಷದಿಂದ ಆರಂಭವಾಗಲಿರುವ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡುವಂತೆ ಮನವಿ ಸಲ್ಲಿಸಿದರು.

ಈ ವೇಳೆ ಮಾಜಿ ಸಚಿವ ಚಲುವರಾಯಸ್ವಾಮಿ, ನೂತನ ಎಂಎಲ್ಸಿ ದಿನೇಶ್ ಗೂಳಿಗೌಡ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಉಪಸ್ಥಿತರಿದ್ದರು.

Share Post