ಸಲ್ಮಾನ್ ಖಾನ್ಗೆ ಹುಟ್ಟು ಹಬ್ಬದ ಸಂಭ್ರಮ: ಶುಭಾಷಯಗಳ ಸುರಿಮಳೆ
ಮುಂಬೈ: ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ 56ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ತಿದಾರೆ. ಸಲ್ಲುಗೆ ಅಭಿಮಾನಿಗಳು, ಕುಟುಂಬಸ್ಥರು, ಆಪ್ತರು ಹಾಗೂ ಸೆಲೆಬ್ರೆಟಿಗಳು ಶುಭಾಷಯ ಕೋರಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಮನಸಲ್ಲಿ ಸ್ಥಾನ ಪಡೆದುಕೊಂಡಿರುವ ಸಲ್ಲು ಡಿಸೆಂಬರ್ 27, 1965ರಂದು ಮಧ್ಯಪ್ರದೇಶದ ಇಂದೋರ್ನಲ್ಲಿ ಜನಿಸಿದ್ರು. 1988ರಿಂದ ಸಿನಿಮಾ ರಂಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.
ಬಾಲಿವುಡ್ ಬಾಕ್ಸ್ ಆಫೀಸ್ನಲ್ಲಿ ತಮ್ಮದೇ ಆದ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ನಟ, ನಿರ್ಮಾಪಕ, ಟಿವಿ ನಿರೂಪಕ, ಟಿವಿ ಕಾರ್ಯಕ್ರಮಗಳ ಜಡ್ಜ್ ಹಾಗೂ ಉದ್ಯಮಿ ಮುಂತಾದ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಲ್ಮಾನ್ ಹುಟ್ಟು ಹಬ್ಬಕ್ಕೆ ಬಾಲಿವುಡ್ ಹಾಗೂ ದಕ್ಷಿಣ ಭಾರತದ ಚಿತ್ರರಂಗದ ಸೆಲಬ್ರೆಟಿಗಳು ಶುಭ ಹಾರೈಸಿದ್ದಾರೆ.