ನೈಟ್ ಕರ್ಫ್ಯೂ – ಸಿ.ಟಿ ರವಿ ಅಸಮಾಧಾನ
ಚಿಕ್ಕಮಗಳೂರು : ರಾಜ್ಯ ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಿಟಿ ರವಿ, ನಮ್ಮ ಸರ್ಕಾರವೇ ತೆಗೆದುಕೊಂಡ ನಿರ್ಧಾರವನ್ನು ಸರಿ ತಪ್ಪು ಎಂದು ವಿಶ್ಲೇಷಿಸಲು ಸಾಧ್ಯವಿಲ್ಲ. ಆದರೆ ಓಮಿಕ್ರಾನ್‌ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದರು.
ಸರ್ಕಾರ ಜನರನ್ನು ಅನಗತ್ಯ ಭಯಕ್ಕೆ ಒಳಪಡಿಸಬಾರದು. ಸದ್ಯ ಜನ ಜೀವನ ಸಹಜ ಸ್ಥಿತಿಯಲ್ಲಿದೆ. ಆದರೆ ಜನರು ಎಚ್ಚರವಹಿಸಬೇಕು ಅಷ್ಟೇ ಎಂದು ಸಿಟಿ ರವಿ ನೈಟ್ ಕರ್ಫ್ಯೂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯ ವರದಿ ಆಧರಿಸಿ ಕರ್ನಾಟಕ ಸರ್ಕಾರ ಡಿಸೆಂಬರ್ ೨೮ ರಿಂದ ೧೦ ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಮಾಡಿದೆ