International

ದುಬೈನಲ್ಲಿ ಕುಟುಂಬದೊಂದಿಗೆ ರಾಜಾಹುಲಿ ವಿಹಾರ..!

ದುಬೈ : ವಿಧಾನಪರಿಷತ್‌ ಚುನಾವಣೆ, ಚಳಿಗಾಲದ ಅಧಿವೇಶನದ ನಂತರ ಮಾಜಿ ಸಿಎಂ ಯಡಿಯೂರಪ್ಪ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದಾರೆ.. ತಮ್ಮ ಕುಟುಂಬದ ಸದಸ್ಯರೊಂದಿಗೆ ಅವರು ದಯಬೈ ಪ್ರವಾಸ ಕೈಗೊಂಡಿದ್ದಾರೆ. ದುಬೈನ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಮಾಜಿ ಸಿಎಂ ಎಂಜಾಯ್‌ ಮಾಡುತ್ತಿದ್ದಾರೆ.

 ಡಿ.24ರಂದು ಬೆಂಗಳೂರಿನಿಂದ ಯಡಿಯೂರಪ್ಪ ಹಾಗೂ ಅವರ ಕುಟುಂಬ ದುಬೈಗೆ ತೆರಳಿತು.  ಯಡಿಯೂರಪ್ಪ ಹಾಗೂ ಕುಟುಂಬಸ್ಥರು ದುಬೈನ ಪ್ರಮುಖ ಪ್ರವಾಸಿ ತಾಣಗಳಿಗೆ ತೆರಳಿ ವೀಕ್ಷಣೆ ಮಾಡುತ್ತಿದ್ದಾರೆ. ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಮತ್ತು ಮೊಮ್ಮಕ್ಕಳು ಕೂಡಾ ಯಡಿಯೂರಪ್ಪ ಅವರ ಜೊತೆಗಿದ್ದಾರೆ. ಮೂಲಗಳ ಪ್ರಕಾರ ಬುಧವಾರ ಅಂದರೆ ನಾಳೆ ಅವರು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ತಿಳಿದುಬಂದಿದೆ.

 

 

Share Post