Politics

ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ಗುರಿ – ಬೊಮ್ಮಾಯಿ

ಹುಬ್ಬಳ್ಳಿ : ೨೦೨೩ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದು ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್‌ ಬೊಮ್ಮಾಯಿ ಪ್ರತಿ ನಿತ್ಯ ೧೫ ಗಂಟೆ ಕೆಲಸ ಮಾಡ್ತೀನಿ. ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭ ಮಾಡಿದ್ದೇನೆ ಎಂದು ಹೇಳಿದರು.

ಅರುಣ್ ಸಿಂಗ್‌ ಸೇರಿದಂತೆ ಹೈಕಮಾಂಡ್‌ನವರು ವಿಶ್ವಾಸವಿರಿಸಿದ್ದಾರೆ. ಹಾಗೆಯೇ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೆ ಹೋಗಿದ್ದಾರೆ.

Share Post