Districts

ಹಿಂದೂ ದೇವಾಲಯಗಳು ಕಾನೂನಿಂದ ಮುಕ್ತ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹಿಂದೂ ದೇವಾಲಯಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು,. ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಅಂಜನಾದ್ರಿ ಬೆಟ್ಟವನ್ನು ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ. ಆಂಜನೇಯನ ಜನ್ಮ ಸ್ಥಳವಾದ ಅಂಜನಾದ್ರಿ ಬೆಟ್ಟವನ್ನು ರಾಜ್ಯ ಸರ್ಕಾರದಿಂದ ಅಭಿವೃದ್ಧಿಪಡಿಸುತ್ತೇವೆ. ಬರುವ ಭಕ್ತರು ಸೂಕ್ತ ಮೂಲ ಸೌಕರ್ಯಗಳನ್ನು ಒದಗಿಸುತ್ತೇವೆ. ಸಾರಿಗೆ ವ್ಯವಸ್ಥೆಯನ್ನೂ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಇನ್ನು ಅಂಜನಾದ್ರಿ ಬೆಟ್ಟವನ್ನು ಅಭಿವೃದ್ಧಿಪಡಿಸಿದ ಮೇಲೆ ಪ್ರಧಾನಿ ಮೋದಿಯವರೇ ಅದನ್ನು ಉದ್ಘಾಟನೆ ಮಾಡುತ್ತಾರೆ ಎಂದು ಸಿಎಂ ಹೇಳಿದರು.

 

Share Post