Economy

ಅನ್ನದಾತನಿಗೆ ಸಿಹಿಸುದ್ದಿ: ಪಿಎಂ-ಕಿಸಾನ್‌ ಯೋಜನೆಯಡಿ 20,000 ಕೋಟಿ ಹಣ ಬಿಡುಗಡೆ

ದೆಹಲಿ: ಭಾರತ ಸರ್ಕಾರವು ಸಣ್ಣ ಮತ್ತು ಅತೀ ಸಣ್ಣ ರೈತರ ಆದಾಯವನ್ನು ಹೆಚ್ಚಿಸುವ ಸಲುವಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಈಗಾಗಲೇ ಚಾಲ್ತಿಯಲ್ಲಿದ್ದು, ದೇಶದ ಎಲ್ಲಾ ಸಣ್ಣ ಮತ್ತು ಅತೀ ಸಣ್ಣ ರೈತರು ಇದರ ಸದುಪಯೋಗ ಪಡೆಯುತ್ತಿದ್ದಾರೆ. ಈ ಯೋಜನೆಯ 10ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿಯವರು ಜನವರಿ 1, 2022ರಂದು ಬಿಡುಗಡೆ ಮಾಡಲಿದ್ದಾರೆ. ಸುಮಾರು ಇಪ್ಪತ್ತು ಸಾವಿರ ಕೋಟಿ ಹಣವನ್ನು ಈ ನಿಧಿಗೆ ಜಮಾವಣೆ ಮಾಡಲಿದ್ದು ಉತ್ತು ಕೋಟಿಗೂ ಹೆಚ್ಚು ರೈತರುಗೆ ಈ ಹಣ ಸಿಗಲಿದೆ. ಇದುವರೆಗೂ 1.6 ಲಕ್ಷ ಕೋಟಿಗೂ ಅಧಿಕ ಮೊತ್ತದ ಹಣವನ್ನು ರೈತ ಕುಟುಂಬಗಳಿಗೆ ವರ್ಗಾಯಿಸಲಾಗಿದೆ.

ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರು ಈ ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ. ಎರಡು ಹೆಕ್ಟೇರ್‌ವರೆಗೆ ಕೃಷಿ ಭೂಮಿ ಹೊಂದಿರುವ ಯಾವುದೇ ರೈತರು ಸಹ ಈ ಯೋಜನೆಯ ಫಲಾನುಭವಿಗಳಾಗಬಹುದು. ಒಂದು ವೇಳೆ ನೋಂದಾವಣಿಯಾಗದಿದ್ದಲ್ಲಿ ಕೂಡಲೇ ನಿಮ್ಮ ಹತ್ತಿರದ ಕೃಷಿ ಇಲಾಖೆಗೆ ಭೇಟಿ ನೀಡಿ ಮಾಹಿತಿ ಪಡೆದು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ.

 

Share Post