ರಸ್ತೆ ಗುಂಡಿ ಮುಚ್ಚಲು ಡೆಡ್‌ಲೈನ್: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಂಗಳೂರು: ಯಮಸ್ವರೂಪಿ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಡೆಡ್‌ಲೈನ್ ನೀಡಿದ್ದಾರೆ. ಮಾರ್ಚ್ ಒಳಗೆ ಬೆಂಗಳೂರಿನಲ್ಲಿ ಒಂದೇ ಒಂದು ಗುಂಡಿ ದೂರು ದಾಖಲಾಗಬಾರದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಬೆಂಗಳೂರು ನಗರ ಅಭಿವೃದ್ದಿ ಕುರಿತು ಸಭೆ ನಡೆಸಲಾಯಿತು ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ರಾಜ್ಯ ರಾಜಧಾನಿ ಕಂಡ ಕಂಡಲ್ಲೆಲ್ಲಾ ಗುಂಡಿ ಇದ್ರೆ ಹೇಗೆ? ಜನ ಸಂಚಾರಕ್ಕೆ ತೊಂದರೆ ಉಂಟಾಗಬಾರದು, ಜೊತೆಗೆ ರಸ್ತೆ ಕಾಮಗಾರಿ ತೀರಾ ಕಳಪೆಯಾಗಿವೆ ಎಂಬ ಆರೋಪಗಳೂ ಕೇಳಿ ಬಂದಿವೆ. ಅಪಾಯಕಾರಿ ಗುಂಡಿಗಳಿಂದ ಯಾವುದೇ ಪ್ರಾಣ ಹಾನಿ ಸಂಭವಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದೇ ಎಂದು ಎಚ್ಚರಿಕೆ ನೀಡಿದ್ರು.
ಮುಂದುವರಿದು ಮಳೆ ಹಾನಿಯ ಅನಾಹುತಗಳ ಬಗ್ಗೆ ಪ್ರಸ್ತಾಪ ಮಾಡಲಾಯಿತು. ಮಳೆ ಬಂದ್ರೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಆಗುತ್ತೆ. ಇದಕ್ಕೆ ಮುಖ್ಯ ಕಾರಣ ರಾಜಕಾಲುವೆ ಒತ್ತುವರಿ ಮೊದಲು ರಾಜಕಾಲುವೆ ಒತ್ತುವರಿಯನ್ನು ನಿಲ್ಲಿಸಿ. ಒತ್ತುವರಿದಾರರಿಗೆ ಬಿಸಿ ಮುಟ್ಟಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆಯನ್ನು ನೀಡಿದ್ರು. ಬೆಂಗಳೂರಿನಲ್ಲಿ ಒತ್ತುವರಿದಾರರ ಹಾವಳಿ ಹೆಚ್ಚಾಗಿದೆ. ಮಳೆ ಬಂದ್ರೆ ಸಾಕಷ್ಟು ಸಮಸ್ಯೆಗಳಾಗುತ್ತವೆ. ನೀರು ಸರಾಗವಾಗಿ ಹರಿಯಲು ಒತ್ತುವರಿ ತೆರವು ಮಾಡಿ. ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯ ನಡೆಯಬೇಕು. ರಸ್ತೆ ಗುಂಡಿ ಮುಚ್ಚುವ ಕಾರ್ಯ ಬೇಗ ಆಗಬೇಕು ಅಂತ ಅಧಿಕಾರಿಗಳಿಗೆ ತಿಳಿಸಿದರು.