ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ
ಬೆಂಗಳೂರು : ಸಂಜನಾ ತಾಯಿಯಾಗ್ತಿದ್ದಾರೆ. ಹೊಸ ವರ್ಷಕ್ಕೆ ಸಂಜನಾ ಗಲ್ರಾನಿ ಸಿಹಿ ಸುದ್ದಿ ಕೊಟ್ಟಿದ್ದಾರೆ. ಸಂಜನಾ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ವರ್ಷದ ಮೇ ತಿಂಗಳಿನಲ್ಲಿ ಸಂಜನಾ ಅವರ ಕುಟುಂಬಕ್ಕೆ ಹೊಸ ಅತಿಥಿ ಆಗಮನವಾಗಲಿದೆ.
ಮದುವೆ, ಡ್ರಗ್ ಕೇಸ್ ಮುಂತಾದ ಕಾರಣಗಳಿಗೆ ಕಳೆದ ಎರಡು ವರ್ಷಗಳಿಂದಲೂ ಸಂಜನಾ ಸುದ್ದಿಯಲ್ಲಿದ್ದಾರೆ. ಈ ನಡುವೆಯೇ ಇದೀಗ ನಟಿ ತಾಯಿಯಾಗುತ್ತಿದ್ದಾರೆ. ನಟಿ ಸಂಜನಾ ಮುಸ್ಲಿಂ ಸಂಪ್ರದಾಯದಲ್ಲಿ ವೈದ್ಯ ಅಜೀಜ್ ಪಾಷ ಅವರನ್ನು ಮದುವೆಯಾಗಿದ್ದರು. ಇದಕ್ಕೆ ಪೂರಕ ಎಂಬಂತೆ ಮದುವೆಯ ಫೋಟೋ ಕೂಡ ವೈರಲ್ ಆಗಿತ್ತು.