ಡಿಸೆಂಬರ್‌ನಲ್ಲಿ ದೇಶದಲ್ಲಿ ಸಂಗ್ರಹವಾದ GST ಮೊತ್ತ ಎಷ್ಟು ಗೊತ್ತಾ..?
ನವದೆಹಲಿ: ಡಿಸೆಂಬರ್ ತಿಂಗಳಲ್ಲಿ ದೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಿಎಸ್‌ಟಿ ಪಾಲು ಒಟ್ಟು 1.30 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಕೊವಿಡ್ ನಂತರ ಸತತ ಆರನೇ ತಿಂಗಳಲ್ಲೂ ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ದಾಟಿದೆ. ಆದರೆ ನವೆಂಬರ್ ತಿಂಗಳಿಗೆ ಹೋಲಿಸಿಕೊಂಡರೆ ಡಿಸೆಂಬರ್ ತಿಂಗಳ ತೆರಿಗೆ ಸಂಗ್ರಹ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ.
ಡಿಸೆಂಬರ್ ತಿಂಗಳಲ್ಲಿ 1, 29, 780 ಕೋಟಿ ರೂಪಾಯಿಗಳು ಜಿಎಸ್‌ಟಿ ರೂಪದಲ್ಲಿ ಸಂಗ್ರಹವಾಗಿದೆ. ಆದರೆ ನವೆಂಬರ್ ತಿಂಗಳಲ್ಲಿ 1,31,000 ಕೋಟಿ ರೂಪಾಯಿಗಳ ತೆರಿಗೆ ಸಂಗ್ರಹವಾಗಿತ್ತು. ಅಂದರೆ ಡಿಸೆಂಬರ್ ತಿಂಗಳಲ್ಲಿ ಒಂದು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ತೆರಿಗೆ ಸಂಗ್ರಹ ಕಡಿಮೆಯಾಗಿದೆ. ಡಿಸೆಂಬರ್‌ನಲ್ಲಿ ಕೇಂದ್ರದ ಪಾಲಿನ ತೆರಿಗೆಯನ್ನು 22,578 ಕೋಟಿ ರೂಪಾಯಿ, ರಾಜ್ಯಗಳ ಪಾಲಿನ ಜಿಎಸ್‌ಟಿಯನ್ನು 28,658 ಕೋಟಿ ರೂಪಾಯಿ ಹಾಗೂ 69,155 ಕೋಟಿ ರೂಪಾಯಿ ಐಜಿಎಸ್‌ಟಿಯನ್ನು ಸಂಗ್ರಹ ಮಾಡಲಾಗಿದೆ. ಇನ್ನು ಸೆಸ್ ರೂಪದಲ್ಲಿ ಡಿಸೆಂಬರ್‌ನಲ್ಲಿ ಒಟ್ಟು 9,389 ಕೋಟಿ ರೂಪಾಯಿಯನ್ನು ಸಂಗ್ರಹಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.