ಶೇ50 ರಷ್ಟು ಸಿಬ್ಬಂದಿಗೆ ಮನೆಯಿಂದ ಕೆಲಸ – ಕೇಂದ್ರ ಸೂಚನೆ
ನವದೆಹಲಿ : ಕೇಂದ್ರ ಸರ್ಕಾರದ ಅಧೀನ ಕಾರ್ಯದರ್ಶಿಗಿಂತ ಕೆಳ ಶ್ರೇಣಿಯ ಸಿಬ್ಬಂದಿಯಲ್ಲಿ ಶೇ50ರಷ್ಟು ಮಂದಿ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿ ಸಿಬ್ಬಂದಿ ಸಚಿವಾಲಯವು ಸೋಮವಾರ ಆದೇಶ ಹೊರಡಿಸಿದೆ.
ಗರ್ಭಿಣಿಯರು ಮತ್ತು ಅಂಗವೈಕಲ್ಯ ಇರುವ ನೌಕರರು ಕಚೇರಿಗೆ ಹಾಜರಾಗುವುದಕ್ಕೆ ವಿನಾಯಿತಿ ನೀಡಲಾಗಿದೆ. ದಟ್ಟಣೆಯಾಗುವುದನ್ನು ತಡೆಯಲು ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಪಾಳಿ ವ್ಯವಸ್ಥೆಯಲ್ಲಿ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಕೋವಿಡ್ ಕಂಟೈನ್‌ಮೆಂಟ್ ವಲಯಗಳಲ್ಲಿ ನೆಲೆಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯತಿ ನೀಡಲಾಗಿದೆ. ಕಂಟೈನ್‌ಮೆಂಟ್ ವಲಯವು ಸಹಜ ಸ್ಥಿತಿಗೆ ಮರಳುವವರೆಗೆ ಇದು ಅನ್ವಯವಾಗುತ್ತದೆ.