ತಾಂಜಾನಿಯಾದಲ್ಲಿ ಭೀಕರ ಅಪಘಾತ; 14 ಮಂದಿ ದುರ್ಮರಣ..!
ಡೊಡೊಮಾ: ಚಾಲಕನ ನಿಯಂತ್ರಣ ತಪ್ಪಿದ ಕಾರು ಜನ ಸಂದಣಿ ಮೇಲೆ ನುಗ್ಗಿದ್ದರಿಂದ ತಾಂಜಾನಿಯಾದ ಡೊಡೊಮಾದಲ್ಲಿ 14 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ದುರಂತದಲ್ಲಿ 22 ಮಂದಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಡೊಡೊಮಾದ ಲಿಡುಂಬೆ ಎಂಬ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಸ್ಕ್ಯಾನಿಯಾ ಕಾರನ್ನು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು, ಪಾದಚಾರಿಗಳ ಮೇಲೆ ಕಾರು ನುಗ್ಗಿದೆ. ಘಟನೆಯಲ್ಲಿ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 22 ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ತಾಂಜಾನಿಯಾ ಅಧ್ಯಕ್ಷೀಯ ಕಚೇರಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಇನ್ನು ಘಟನೆ ಬಗ್ಗೆ ರಾಜಾನಿಯಾ ಅಧ್ಯಕ್ಷ ಸಾಮಿಯಾ ಸುಲುಹು ಹಸನ್ ಆಘಾತ ವ್ಯಕ್ತಪಡಿಸಿದ್ದಾರೆ.