Bengaluru

ಶಾಲೆ ಮುಚ್ಚುವ ಬಗ್ಗೆ ಚರ್ಚೆ : ಆರೋಗ್ಯ ಸಚಿವ ಡಾ.ಸುಧಾಕರ್‌

ಬೆಂಗಳೂರು: ರಾಜ್ಯದಲ್ಲಿ ಕೊವಿಡ್‌ ಪಾಸಿಟಿವಿಟಿ ದರ ೧.೨ ಗಿಂತ ಜಾಸ್ತಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಈಗಾಗಲೇ ಕೊವಿಡ್‌ ಮೂರನೇ ಅಲೆ ವಕ್ಕರಿಸಿದಂತೆ ಕಾಣುತ್ತಿದೆ. ಹೀಗಾಗಿ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲಾ, ಕಾಲೇಜುಗಳನ್ನು ಬಂದ್‌ ಮಾಡಲಾಗಿದೆ. ರಾಜ್ಯದಲ್ಲೂ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಬಗ್ಗೆ ಸಂಜೆಯ ಸಭೆಯಲ್ಲಿ ಚರ್ಚೆ ನಡೆಲಾಗುವುದು ಎಂದು ಆರೋಗ್ಯ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೊವಿಡ್‌ ಮೂರಲೇ ಅಲೆ ವಕ್ಕರಿಸಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕು. ಜೊತೆಗೆ ಕೊವಿಡ್‌ ನಿಯಮಗಳನ್ನು ಪಾಲಿಸಬೇಕು ಎಂದು ಸಚಿವ ಸುಧಾಕರ್‌ ಹೇಳಿದ್ದಾರೆ.

 

 

Share Post