ಮೇಕೆದಾಟು ಯೋಜನೆ: ಎಲ್ಲಾ ಅರ್ಜಿ ಸೇರಿಸಿ ಜ.27ಕ್ಕೆ ವಿಚಾರಣೆ
ನವದೆಹಲಿ: ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಜನವರಿ 27ರಂದು ಮೇಕೆದಾಟು ಯೋಜನೆಗೆ ಸಂಬಂಧಿಸಿ ಕರ್ನಾಟಕ ಹಾಗೂ ತಮಿಳುನಾಡು ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ಒಂದೇ ಬಾರಿಗೆ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ಪೀಠದ ಆದೇಶವನ್ನು ವಜಾ ಮಾಡಿದ್ದ ಎನ್ಜಿಟಿ ಪ್ರಧಾನ ಪೀಠದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ಸೇರಿದಂತೆ ಮೇಕೆದಾಟು ಯೋಜನೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಜನವರಿ 27ಕ್ಕೆ ಮಾಡಲಾಗುವುದೆಂದು ಸುಪ್ರೀಂ ಕೋರ್ಟ್ ಹೇಳಿದೆ.