ತಜ್ಞರ ಸಲಹೆಯಂತೆ ಸರ್ಕಾರ ನಿಯಮ ಜಾರಿಗೊಳಿಸಿದೆ- ಗೃಹ ಸಚಿವ
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಹೊಸ ಕೊರೋನಾ ಮಾರ್ಗಸೂಚಿ ಜಾರಿಗೊಳಿಸಿದೆ. ತಜ್ಞರ ಸಲಹೆ ಮೇರೆಗೆ ನಗರದಲ್ಲಿ ಕೆಲ ನಿರ್ಬಂಧ ಹೇರಲಾಗಿದೆ. ನಾಳೆಯಿಂದ ಶಾಲೆಗಳು ಬಂದ್ ಆಗಲಿವೆ. ೨ ವಾರಗಳ ಕಾಲ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಕೂಡ ಜಾರಿಗೊಳಿಸಿದೆ.
ಈ ಕುರಿತು ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ೨ನೇ ಅಲೆ ವೇಳೆ ನಿರ್ಲಕ್ಷ್ಯದಿಂದ ಹಲವರು ಮೃತಪಟ್ಟಿದ್ದರು. ಈ ಬಾರಿಯೂ ಹಾಗೇ ಆಗಬಾರದು ಅಂತಾ ತಜ್ಞರ ಸಲಹೆಯಂತೆ ಸರ್ಕಾರ ನಿಯಮಗಳನ್ನು ಜಾರಿಗೊಳಿಸಿದೆ. ಕಾಂಗ್ರೆಸ್ ಪಾದಯಾತ್ರೆ ತಡೆಯಲು ರೂಲ್ಸ್ ತಂದಿಲ್ಲ. ಆದರೆ ಕಾಂಗ್ರೆಸ್ ನವರು ಇದರಲ್ಲೂ ರಾಜಕಾರಣ ಹುಡುಕುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಸಹ ಕೋವಿಡ್ ನಿಯಂತ್ರಿಸುವ ಸಲುವಾಗಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ವಿಧಿಸಿದೆ. ತುರ್ತು ಸೇವೆ ಬಿಟ್ಟು ಬೇರೆ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲಾಗಿದೆ ಎಂದರು.