Districts

ಮೈಸೂರು ನಗರದಲ್ಲಿ ಹೆಚ್ಚು ಭೂ ಅಕ್ರಮ: ಕಠಿಣ ಕ್ರಮಕ್ಕೆ ಮುಂದಾದ ಜಿಲ್ಲಾಧಿಕಾರಿ ಬಗಾದಿ

ಮೈಸೂರು: ಮೈಸೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂ ಅಕ್ರಮಗಳು ಹೆಚ್ಚು ನಡೆಯುತ್ತಿವೆ. ಅದರಲ್ಲೂ ಪ್ರಭಾವಿಗಳು, ರಾಜಕಾರಣಿಗಳೇ ಹೆಚ್ಚು ಈ ಅಕ್ರಮದಲ್ಲಿ ತೊಡಗಿದ್ದಾರೆ. ಈ ಬಗ್ಗೆ ದೂರುಗಳು ಬಂದ ಕಾರಣ ಮೈಸೂರು ಜಿಲ್ಲಾಧಿಕಾರಿ ಗೌತಮ್‌ ಬಗಾದಿ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಅಕ್ರಮ ನಡೆಯುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಸುತ್ತಮುತ್ತ ಸರ್ಕಾರಿ ಭೂಮಿ ಒತ್ತುವರಿ, ಅನಧಿಕೃತವಾಗಿ ಲೇಔಟ್‌ ನಿರ್ಮಾಣ ಸೇರಿದಂತೆ ಹಲವು ಅಕ್ರಮಗಳು ನಡೆಯುತ್ತಿವೆ. ಈ ಸಂಬಂಧ ಆರ್‌ಟಿಐ ಕಾರ್ಯಕರ್ತರೊಬ್ಬರು ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಯವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ತನಿಖೆಗೆ ಆದೇಶ ನೀಡಿತ್ತು. ಕಳೆದ ಸೆಪ್ಟೆಂಬರ್‌ನಲ್ಲೇ ಈಗಿನ ಜಿಲ್ಲಾಧಿಕಾರಿ ಗೌತಮ್‌ ಬಗಾದಿಯವರಿಗೆ ಸರ್ಕಾರ ಸೂಚನೆ ನೀಡಿತ್ತು. ಆದ್ರೆ ಜಿಲ್ಲಾಧಿಕಾರಿ ಬಗಾದಿ ನಾಲ್ಕು ತಿಂಗಳ ಕಾಲಾವಕಾಶ ಕೇಳಿದ್ದರು. ನಾಲ್ಕು ಮುಗಿದ ಕಾರಣ, ಈಗ ಜಿಲ್ಲಾಧಿಕಾರಿ ಕಾರ್ಯಾಚರಣೆ ಶುರು ಮಾಡಿದ್ದಾರೆ. ಅಧಿಕಾರಿಗಳು ತಂಡದೊಂದಿಗೆ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಮೈಸೂರು ತಾಲೂಕಿನ ಕೇರ್ಗಳ್ಳಿ, ದಟ್ಟಗಳ್ಳಿ, ಯಡಹಳ್ಳಿ, ಲಿಂಗಾಂಬುದಿಪಾಳ್ಯದಲ್ಲಿ ನಡೆದಿದೆ ಎನ್ನಲಾದ ಭೂ ಅಕ್ರಮಗಳ ಪರಿಶೀಲನೆ ನಡೆಸಿದ್ದಾರೆ.

Share Post