Bengaluru

ಮೇಕೆದಾಟು ಹೋರಾಟಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ

ಬೆಂಗಳೂರು: ಮೇಕೆದಾಟು ಹೋರಾಟಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ನೀಡಲು ತೀರ್ಮಾನಿಸಿದೆ. ಕೊವಿಡ್‌ ಹೆಚ್ಚಾಗುತ್ತಿರುವುದರಿಂದ ಪಾದಯಾತ್ರೆಯಲ್ಲಿ ಪಾಲ್ಗೊಲ್ಳುವುದು ಕಷ್ಟವಾಗಬಹುದು. ಆದರೆ ಪಾದಯಾತ್ರೆಗೆ ಬೈತಿಕ ಬೆಂಬಲವಿರುತ್ತದೆ. ಜೊತೆಗೆ ವೀಕೆಂಡ್‌ ಕರ್ಫ್ಯೂ ನಂತರ ಅವಕಾಶ ಸಿಕ್ಕ ಸಮಯದಲ್ಲಿ ಪಾದಯಾತ್ರೆಯಲ್ಲಿ ಸೇರಿಕೊಳ್ಳುತ್ತೇವೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್‌.ಜೈರಾಜ್‌ ತಿಳಿಸಿದದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಅವರು, ಮೇಕೆದಾಟು ಹೋರಾಟ ಕೇವಲ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಅದು ಪಕ್ಷಾತೀತ ಹೋರಾಟವಾಗಿದೆ. ಡಿ.ಕೆ.ಶಿವಕುಮಾರ್‌ ಅವರು ವೈಯಕ್ತಿಕವಾಗಿ ವಾಣಿಜ್ಯ ಮಂಡಳಿ ಕಚೇರಿಗೆ ಭೇಟಿ ನೀಡಿ ಬೆಂಬಲ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ವಾಣಿಜ್ಯ ಮಂಡಳಿಯಿಂದ ಹೋರಾಟಕ್ಕೆ ಬೆಂಬಲ ನೀಡಲಾಗುತ್ತಿದೆ. ಈ ಸಂಬಂಧ ಎಲ್ಲಾ ಕಲಾವಿದರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದೇವೆ. ಕೊವಿಡ್‌ ಇರುವುದರಿಂದ ಬೌತಿಕವಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದು ಕಷ್ಟ. ಆದರೆ ನೈತಿಕ ಬೆಂಬಲಿ ನೀಡುವುದಾಗಿ ಎಲ್ಲರೂ ಹೇಳಿದ್ದಾರೆ ಅಂತ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌ ತಿಳಿಸಿದ್ದಾರೆ.

Share Post