ಸತ್ಯಮಂಗಲದಲ್ಲಿ ಖಾಸಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಚಾಮರಾಜನಗರ: ಕೇರಳದ ಕೊಚ್ಚಿಗೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಒಂದು ಚಾಮರಾಜನಗರದ ಬಳಿ ತುರ್ತು ಭೂಸ್ಪರ್ಶ ಮಾಡಿದೆ. ಪೈಲಟ್ ಸೇರಿ ನಾಲ್ಕು ಜನರಿದ್ದ ಹೆಲಿಕಾಪ್ಟರ್ನಲ್ಲಿ ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣ ಬೆಳೆಸಿದ್ದರು. ಆದ್ರೆ ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಓಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಪೈಲಟ್ ಸಮಯಪ್ರಜ್ಞೆಯಿಂದ ಸತ್ಯಮಂಗಲದ ಕಡಂಬೂರ್ ಎಂಬಲ್ಲಿ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ. ಹೆಲಿಕಾಪ್ಟರ್ ಸೇಫಾಗಿ ಲ್ಯಾಂಡ್ ಆಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಹೆಲಿಕಾಫ್ಟರ್ ಸಿಎಸ್ ಏವಿಯೇಷನ್ಗೆ ಸೇರಿದ್ದು ಎಂದು ತಿಳಿದುಬಂದಿದೆ. ಬೆಂಗಳೂರಿನ ಭರತ್ ಹಾಗೂ ಶೀಲಾ ಭರತ್ ಎಂಬುವವರು ಈ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದರು. ಇದ್ರಲ್ಲಿ ಹೆಲಿಕಾಫ್ಟರ್ ಎಂಜಿನಿಯರ್ ಅಂಕಿತ್ ಸಿಂಗ್, ಪೈಲಟ್ ಜಸ್ಪಾಲ್ ಇದ್ದರು. ಭರತ್ ಹಾಗೂ ಶೀಲಾ ಭರತ್ ಕೊಚ್ಚಿಯಲ್ಲಿರುವ ಆಸ್ಪತ್ರೆಯೊಂದಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಹೊಲಗಳ ಮಧ್ಯೆ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದು, ಇದನ್ನು ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರೆಲ್ಲಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದವರ ನೆರವಿಗೆ ನಿಂತಿದ್ದಾರೆ.