Politics

ಕಾಂಗ್ರೆಸ್‌ ಪಾದಯಾತ್ರೆ: ಇದೊಂದು ಬೀದಿ ನಾಟಕ

ಬೆಂಗಳೂರು: ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್‌ ನಾಯಕರು ಪಾದಯಾತ್ರೆ ಆರಂಭ ಮಾಡಿದ್ದಾರೆ. ಡಿ.ಕೆ ಶಿವಕುಮಾರ್‌ ನೇತೃತ್ವದಲ್ಲಿ ಪಾದಯಾತ್ರೆ ನಡೆಯತ್ತಿದೆ. ಇದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ್‌ ಖರ್ಗೆ ಮತ್ತು ಹಿರಿಯ ಕಾಂಗ್ರೆಸ್‌ ನಾಯಕರು, ಸಿನಿಮಾ ಕೆಲ ನಟರು, ಮಠಾಧೀಶರು ಭಾಗಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಕೊರೋನಾ ಮತ್ತು ಒಮಿಕ್ರಾನ್‌ ಹೆಚ್ಚಳವಾಗುತ್ತಿದ್ದರಿಂದ ಸರ್ಕಾರ ಕಠಿಣ ಕ್ರಮಕೈಗೊಂಡಿದೆ. ಜೊತೆಗೆ ಶುಕ್ರವಾರ ರಾತ್ರಿ ೧೦ ಗಂಟೆಯಿಂದ ಸೋಮವಾರ ಬೆಳಗ್ಗೆ ೫ ಗಂಟೆಯವರೆಗೆ ವೀಕೆಂಡ್‌ ಕರ್ಫ್ಯೂ ಜಾರಿಮಾಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಜಾತ್ರೆ, ಪ್ರತಿಭಟನೆ ಸಭೆ ಸಮಾರಂಭಗಳು ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಆದರೂ ಕೂಡ ಕಾಂಗ್ರೆಸ್‌ ನಾಯಕರು ಪಾದಯಾತ್ರೆಗೆ ಮುಂದಾಗಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್‌ ಮಾತನಾಡಿದ್ದಾರೆ. ಕಾಂಗ್ರೆಸ್‌ ನ ಕಪಟ ಬೀದಿ ನಾಟಕವನ್ನು ಜನರು ನೋಡುತ್ತಿದ್ದಾರೆ. ಅವರು ೫ ವರ್ಷ ಅಧಿಕಾರದಲ್ಲಿದ್ದಾಗ ಏನೂ ಮಾಡಿಲ್ಲ. ಡಿಪಿಆರ್‌ ಕೂಡ ಮಾಡುವುದಕ್ಕೆ ಇವರಿಂದ ಸಾಧ್ಯವಾಗಿಲ್ಲ. ಹೀಗಾಗಿ ಇದೊಂದು ಬೀದಿ ನಾಟಕವೆಂದು ಕಿಡಿಕಾರಿದ್ದಾರೆ.
ಇನ್ನು ಕಾವೇರಿ ತಾಯಿಗೆ ಅವರು ಅಪಮಾನ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಒಟ್ಟು ೬ ವರ್ಷಗಳ ಕಾಲ ಆಡಳಿತದಲ್ಲಿತ್ತು. ಆಗಾ ಅವರಿಗೆ ಡಿಪಿಆರ್‌ ಮಾಡುವುದಕ್ಕೆ ಆಗಲಿಲ್ಲ. ಇದರಿಂದಲೇ ಗೊತ್ತಾಗುತ್ತದೆ ಅವರ ಬದ್ಧತೆ ಏನೆಂಬುದು?. ಮೇಕೆದಾಟು ಯೋಜನೆ ನಮ್ಮ ಸರ್ಕಾರದಲ್ಲಿ ಆಗುತ್ತೆ. ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರವೇ ಯೋಜನೆ ಮಾಡುತ್ತದೆ ಎಂದರು.
ಇನ್ನು ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳೇ ಇಲ್ಲ ಎನ್ನುತ್ತಿದ್ದಾರೆ. ಜವಾಬ್ದಾರಿಯತ ಸ್ಥಾನದಲ್ಲಿರುವವರು ಹೀಗೆ ಮಾತನಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊರೋನಾ ನಿಯಂತ್ರಿಸುವುದಕ್ಕೆ ರಾಜ್ಯ ಸರ್ಕಾರ ನಿಗಾ ವಹಿಸಿದೆ. ಇದಕ್ಕೆ ಅವರು ಸಹಕಾರ ನೀಡಬೇಕಿತ್ತು. ಈಗಾಗಲೇ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೋವಿಡ್‌ ಪ್ರಕರಣಗಳು ಪತ್ತೆಯಾಗಿದೆ. ನಿಯಮಗಳನ್ನು ಉಲ್ಲಂಘಿಸಿ ರ್ಯಾಲಿ ಮಾಡುತ್ತಿರುವುದು ಸರಿಯಲ್ಲ. ಅವರು ರಾಜ್ಯದ ಜನರ ಆರೋಗ್ಯಕ್ಕೆ ತೊಂದರೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share Post