Bengaluru

ಸಚಿವರ ಪುತ್ರನಿಗೆ ಬ್ಲ್ಯಾಕ್‌ಮೇಲ್‌: ಇಬ್ಬರು ಆರೋಪಿಗಳು ಅರೆಸ್ಟ್‌

ಬೆಂಗಳೂರು : ನಿಮ್ಮ ಅಶ್ಲೀಲ ವಿಡಿಯೋವೊಂದು ನಮ್ಮ ಬಳಿ ಇದ್ದು, ಅದನ್ನು ಬಿಡುಗಡೆ ಮಾಡುತ್ತೇವೆಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಪುತ್ರನಿಗೆ ಬೆದರಿಕೆ ಹಾಕುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

  ಸಚಿವ ಎಸ್‌.ಟಿ.ಸೋಮಶೇಖರ್‌ ಪುತ್ರ ನಿಶಾಂತ್‌ ಗೆ ಸಣ್ಣ ವಿಡಿಯೋ ಒಂದನ್ನು ಕಳುಹಿಸಿ, ಇನ್ನೂ ವಿಡಿಯೋ ಇದೆ. ಅದನ್ನು ಮಾಧ್ಯಮಗಳಿಗೆ ನೀಡುತ್ತವೆ. ಕೊಡಬಾರದು ಎಂದರೆ ಒಂದು ಕೋಟಿ ರೂಪಾಯಿ ನೀಡಿ ಎಂದು ಬೆದರಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಸಚಿವ ಸೋಮಶೇಖರ್‌ ಪುತ್ರ ನಿಶಾಂತ್‌ ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ತನಿಖೆ ಕೈಗೊಂಡಿದ್ದ ಸಿಸಿಬಿ ಪೊಲೀಸರು, ಜ್ಯೋತಿಷಿಯೊಬ್ಬರ ಪುತ್ರ ರಾಹುಲ್‌ ಭಟ್‌ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣದ ಹಿಂದೆ ಇನ್ನೂ ಯಾರು ಯಾರು ಇದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

Share Post