ಪುಷ್ಪ ನಂತರ ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ ಮಂದಣ್ಣ
ಅಲ್ಲು ಅರ್ಜುನ್ ಅವರ ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಿನಿಮಾ ಸಖತ್ ಹಿಟ್ ಆದ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಪುಷ್ಪ ದಿ ರೈಸ್ ಸಿನಿಮಾ ದೊಡ್ಡ ಮಟ್ಟದ ಹಿಟ್ ಕಾಣದಿದ್ದರೂ ಕೂಡ ಉತ್ತಮ ರೆಸ್ಪಾನ್ಸ್ ಅಂತೂ ಸಿಕ್ಕಿದೆ.
ರಶ್ಮಿಕಾ ತೆಲುಗಿನಲ್ಲಿ ಗೀತಾ ಗೋವಿಂದಂ, ಡಿಯರ್ ಕಾಮ್ರೆಡ್ ಸಿನಿಮಾ ಮೂಲಕ ತೆಲುಗಿನಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸಿದರು. ನಂತರ ರಶ್ಮಿಕಾ ಅವರಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾ ಆಫರ್ ಬರ್ತಿದೆ. ಪುಷ್ಪ ದಿ ರೈಸ್ ಮೊದಲ ಸಿನಿಮಾಗೆ ರಶ್ಮಿಕಾ ಮಂದಣ್ಣ ಅವರು 2 ಕೋಟಿ ಸಂಭಾವನೆ ಪಡೆದಿದ್ದರು ಎನ್ನಲಾಗ್ತಿದೆ.
ಈಗ ಪುಷ್ಪ ಸಿನಿಮಾ ತಂಡ ಸೀಕ್ವೆಲ್ ಸಿನಿಮಾಗೆ ತಯಾರಿ ನಡೆಸುತ್ತಿದೆ. ರಶ್ಮಿಕಾ ಈ ಸಿನಿಮಾಗೆ 3 ಕೋಟಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಡಿ ಗ್ಲಾಮ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಶ್ಮಿಕಾ ಅವರಿಗೆ ಬಾಲಿವುಡ್ನಿಂದಲೂ ಬೇಡಿಕೆ ಹೆಚ್ಚಾಗಿದೆ. ಒಂದು ವೇಳೆ ರಶ್ಮಿಕಾ ಅವರು ಕೇಳಿದಷ್ಟು ಸಂಭಾವನೆಯನ್ನು ಸಿನಿಮಾ ತಂಡ ಕೊಟ್ಟಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ನಟಿ ಎನಿಸಿಕೊಳ್ಳಲಿದ್ದಾರೆ ರಶ್ಮಿಕಾ.
ರಶ್ಮಿಕಾ ಮಂದಣ್ಣ ಅವರ ಹೆಸರನ್ನು ರಶ್ಮಿಕಾ ಮಡೋನಾ ಎಂದು ಮಾಡಿ ನೆಟ್ಟಿಗರ ಆಕ್ರೋಶಕ್ಕೆ ಸಿನಿಮಾ ತಂಡ ಕಾರಣವಾಗಿತ್ತು. ಸದ್ಯ ದೊಡ್ಡ ಮಟ್ಟದ ಸುದ್ದಿಯಾಗದೇ ತೆರೆ ಮರೆಗೆ ಸರಿದಿದೆ.