Cinema

ಫ್ಯಾಶನ್‌ ಶೋನಲ್ಲಿ ಕನ್ನಡದ ಪ್ರತಿಭೆ ನವೀನ್‌ ಕುಮಾರ್‌

ಬೆಂಗಳೂರು: ಫ್ಯಾಶನ್ ಲೋಕದಲ್ಲಿ ತಮ್ಮದೇ ಆದ ಹೆಸರು ಮಾಡಿರುವ, ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಪ್ರತಿಭೆ ಫಾರೆವರ್ ನವೀನ್ ಕುಮಾರ್ ಖ್ಯಾತರಾಗಿದ್ದಾರೆ. ಈಗ ಅವರ
ವಿಭಿನ್ನ, ವಿಶಿಷ್ಟ ವಿನ್ಯಾಸಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ವಿಶೇಷ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ಇದೀಗ ಅವರು
ಹೊಸತನದ ಮೂಲಕ ಫ್ಯಾಶನ್ ಇವೆಂಟ್ ಎದುರುಗೊಳ್ಳುತ್ತಿದ್ದಾರೆ.ಇಂತಹ ಫಾರೆವರ್ ನವೀನ್ ಕುಮಾರ್ ಅವರ ಖ್ಯಾತಿಗೆ ಈಗ ಇನ್ನೊಂದು ಗರಿ ಸೇರಿದೆ.
ಮೆಟ್ ಗಾಲಾ ನಡೆಸಿದ ಏಷ್ಯಾ ಸ್ಟಾರ್ ಗಾಲಾ ಫ್ಯಾಶನ್ ಇವೆಂಟ್ ಇತ್ತೀಚೆಗೆ ಕೊಲಂಬೋದಲ್ಲಿ ನಡೆದಿದೆ. ಮೆಟ್ ಗಾಲಾ ಜಾಗತಿಕ ಮಟ್ಟದ ಅತ್ಯುನ್ನತ ಶ್ರೇಣಿಯ ಫ್ಯಾಶನ್ ಇವೆಂಟ್ ಇದು. ಇವರು ಮೊಟ್ಟ ಮೊದಲ ಬಾರಿಗೆ ಏಷ್ಯಾ ಮಟ್ಟದಲ್ಲಿ ಹಮ್ಮಿಕೊಂಡ ಏಷ್ಯಾ ಸ್ಟಾರ್ ಗಾಲಾ ಇವೆಂಟ್ ನಲ್ಲಿ ಭಾಗಿಯಾಗಿದ್ದರು.
ಹಲವು ವಿಶೇಷತೆಯನ್ನು ಒಳಗೊಂಡ ಈ ಇವೆಂಟ್ ಶ್ರೀಲಂಕಾದ ಕೊಲಂಬೊ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇ ನಲ್ಲಿ ನಡೆದಿದೆ. ಬೇರೆ ಬೇರೆ ದೇಶದ ಪ್ರಖ್ಯಾತ ಫ್ಯಾಶನ್ ಡಿಸೈನರ್ ಗಳು ಹಾಗೂ ಕಲಾವಿದರು ಪಾಲ್ಗೊಂಡ ಈ ರೆಡ್ ಕಾರ್ಪೆಟ್ ಕಾರ್ಯಕ್ರಮಕ್ಕೆ ಭಾರತದಿಂದ ಪ್ರನಿಧಿಸಿದ ಏಕೈಕ ಫ್ಯಾಶನ್ ಡಿಸೈನರ್ ಎಂದರೆ ಅದು ಫಾರೆವರ್ ನವೀನ್ ಕುಮಾರ್. ಇವರ ಜೊತೆಗೆ ವಿನ್ಯಾಸಗಳ ಬ್ರ್ಯಾಂಡ್ ಅಂಬಾಸಿಡರ್ ನಟಿ ಸಂಹಿತಾ ವಿನ್ಯಾ ಕೂಡ ಭಾಗಿಯಾಗಿದ್ದರು. ಭಾರತದಿಂದ ಮೆಟ್ ಗಾಲಾ ಫ್ಯಾಶನ್ ಶೋನಲ್ಲಿ ಹೆಜ್ಜೆ ಹಾಕಿದ ನಟಿಮಣಿಯರೆಂದರೆ ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ದೀಪಿಕಾ ಪಡುಕೋಣೆ. ಇವರ ಸಾಲಿಗೆ ಈಗ ನವೀನ್‌ ಕುಮಾರ್‌ ಸೇರಿದ್ದಾರೆ. ಕೊಲೊಂಬೊದಲ್ಲಿ ನಡೆದ ಈ ವರ್ಣರಂಜಿತ ಸಮಾರಂಭದಲ್ಲಿ ಶಿರಂತಿ ರಾಜಾಪಕ್ಸೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Share Post