ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಕೊರೊನಾ ದೃಢ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಹೋಂ ಕ್ವಾರಂಟೈನ್ನಲ್ಲಿರುವ ಅವರು ಸೋಂಕು ತಗುಲಿರುವುದಾಗಿ ಟ್ವೀಟ್ ಮಾಡಿ ತಿಳಿಸಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.#Covid_19
— Basavaraj S Bommai (@BSBommai) January 10, 2022
ಸಿಎಂ ಬಸವರಾಜ್ ಬೊಮ್ಮಾಯಿಯವರು ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಬಿಜೆಪಿ ನಾಯಕರು ಹಾಗೂ ರಾಜ್ಯದ ಜನತೆ ಹರಸಿದ್ದಾರೆ. ಸೂಕ್ತ ಚಿಕಿತ್ಸೆ ಪಡೆದು ಆಋಒಗ್ಯವಾಗಿರಿ ಎಂದು ಹಲವರು ಸಿಎಂ ಅವರ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದಾರೆ.